ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭ ಕರಂದ್ಲಾಜೆ ಬುಧವಾರ ಸಂಜೆ ಹೆಬ್ರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಸಚಿವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು.
ಚಿಕ್ಕಮಗಳೂರು ಮತ್ತು ಶೃಂಗೇರಿಯಲ್ಲಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಉಡುಪಿ ಜಿಲ್ಲೆಯ ಗಡಿಭಾಗವಾದ ಸೋಮೇಶ್ವರದ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಹೆಬ್ರಿಗೆ ಸಚಿವರು ಆಗಮಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್, ಶಾಸಕ ರಘುಪತಿ ಭಟ್, ಉಸ್ತುವಾರಿ ಉದಯಕುಮಾರ್ ಶೆಟ್ಟಿ, ಮಹಾವೀರ ಹೆಗ್ಡೆ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ , ಕಿರಣ್ ಕೊಡ್ಗಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಹೆಬ್ರಿಯ ಸತೀಶ್ ಪೈ, ಮುನಿಯಾಲು ದಿನೇಶ್ ಪೈ ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರು, ಪಕ್ಷದ ಮಹಿಳಾ ಘಟಕದ ಪ್ರಮುಖರು ಉಪಸ್ಥಿತರಿದ್ದರು.
Advertisement. Scroll to continue reading.