ಬೆಂಗಳೂರು : ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರನ್ನಾಗಿ ಗುರುಲಿಂಗಸ್ವಾಮಿ ಹೆಚ್.ಬಿ. ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅಧಿಸೂಚನೆ ಹೊರಡಿಸಿದ್ದು, ಗುರುಲಿಂಗಸ್ವಾಮಿ, ಹೆಚ್.ಬಿ ಅವರನ್ನು ದಿನಾಂಕ 02-08-2021ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಿದೆ ಎಂಬುದಾಗಿ ತಿಳಿಸಿದ್ದಾರೆ.
Advertisement. Scroll to continue reading.