Connect with us

Hi, what are you looking for?

Diksoochi News

ಸಾಹಿತ್ಯ

ಯಜ್ಞೋಪವೀತಂ ಬಲಮಸ್ತು ತೇಜಃ ; ಪಣಿಯಾಡಿ ರಾಜೇಶ್ ಭಟ್ ಅವರ ಲೇಖನ

0

ಲೇಖಕರು : ಪಣಿಯಾಡಿ ರಾಜೇಶ್ ಭಟ್

ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ವಿಶೇಷ ಆಚರಣೆಗಳಲ್ಲಿ ಋಗುಪಾಕರ್ಮ ಹಾಗೂ ಯಜುರ್ ಉಪಾಕರ್ಮಗಳೂ ಬಹು ಮುಖ್ಯವಾದವುಗಳು. ಈ ದಿನ ವೇದಾಧ್ಯಯನ ಹಾಗೂ ಆಧ್ಯಾತ್ಮ ಸಾಧನೆಗಾಗಿ ಸಂಕಲ್ಪಿಸುವ ದಿನ ಮತ್ತು ವೇದ ಮಂತ್ರಗಳನ್ನು ಕಾಲನಿಯಾಮಕನಾದ ಭಗವಂತನಿಗೆ ಅರ್ಪಿಸುವ ಪುಣ್ಯ ದಿನ. ಈಗಿನ ಕಾಲಸ್ಥಿತಿಯಲ್ಲಿ ಯೋಚಿಸುವುದಾದರೆ ವಟು ಹಾಗೂ ಬ್ರಾಹ್ಮಣ ತನ್ನ ಕರ್ತವ್ಯಗಳ ಪಟ್ಟಿಯನ್ನು ನವೀಕರಿಸುವ ( renewal) ಒಂದು ಕ್ರಮ ಎನ್ನಬಹುದು. ಈ ದಿನ ದೇವ, ಋಷಿ, ಪಿತೃಗಳನ್ನು ನೆನಪಿಸಿಕೊಂಡು ಹವಿಸ್ಸು ಒಪ್ಪಿಸಿ ತರ್ಪಣವನ್ನು ನೀಡುವ ಕ್ರಮ ರೂಡಿಯಲ್ಲಿದೆ. ಆತ ಧರಿಸುವ ಪರಮ ಪವಿತ್ರವಾದ ಯಜ್ಞೋಪವೀತದ ಮೂರೆಳೆದಾರ ಹಾಗೂ ಬ್ರಹ್ಮಗಂಟನ್ನು ನಾಲ್ಕು ವೇದಗಳಿಗೆ ಹೋಲಿಸಲಾಗುತ್ತದೆ ಮತ್ತು ತ್ರಿಕಾಲ ಸಂಧ್ಯಾವಂದನೆಯ ಬಗ್ಗೆ ಜಾಗೃತನಾಗಿರಬೇಕೆಂದು ಇದು ಸೂಚಿಸುತ್ತದೆ. ಒಬ್ಬ ವಟು ಹಾಗೂ ವಿಪ್ರನ ದುರಾಲೋಚನೆಗಳಿಗೆ ಕಡಿವಾಣ ಹಾಕಿ ಸಾತ್ವಿಕನನ್ನಾಗಿ ಮಾಡಿ ಸತ್ಕರ್ಮ ಹಾಗೂ ಧರ್ಮ ಮಾರ್ಗದಲ್ಲಿ ನಡೆಯಲು ಇದು ಪ್ರೇರೇಪಿಸುತ್ತದೆ. ಅವನ ಅಧ್ಯಯನದ ಶಕ್ತಿ ಆ ಯಜ್ಞೋಪವೀತದಲ್ಲಿ ಸಂಚಯನಗೊಂಡು ಆತನಿಗೆ ಸದಾ ರಕ್ಷಣೆಯನ್ನು ನೀಡುತ್ತದೆ ಎನ್ನುವುದು ಬಲ್ಲವರ ನಂಬಿಕೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಹುಬ್ಬಳ್ಳಿ : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ.ನೇಹಾ ಹಿರೇಮಠ ಹತ್ಯೆಯಾದ ವಿದ್ಯಾರ್ಥಿನಿ. ಕಾಲೇಜ್ ಕ್ಯಾಂಪಸ್ ನಲ್ಲಿರುವ ಕ್ಯಾಂಟೀನ್ ನಲ್ಲಿ...

ರಾಜ್ಯ

0 ಮಂಡ್ಯ : ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ.  ಅವಳಿ ಮಕ್ಕಳು  ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಮೃತಪಟ್ಟಿವೆ ಎಂಬ ಪ್ರಕರಣ...

ರಾಷ್ಟ್ರೀಯ

0 ಕಾಸರಗೋಡು:  ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಡೆದ ಅಣಕು ಮತದಾನದ ವೇಳೆ ಬಿಜೆಪಿಗೆ ಚಲಾವಣೆಯಾಗದ ಮತಗಳು ಲಭಿಸಿದ ಕುರಿತು ದೂರಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಅಣಕು ಮತದಾನಕ್ಕೆ ಸಂಬಂಧಿಸಿದಂತೆ ಆರೋಪಗಳ ಕುರಿತು...

ರಾಷ್ಟ್ರೀಯ

0 ನವದೆಹಲಿ: ಭಾರತ ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು ಫಿಲಿಪೈನ್ಸ್‌ಗೆ ರಫ್ತಾಗಿದೆ. ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ...

ಅರೆ ಹೌದಾ!

0 ಬೀಜಿಂಗ್‌ : ಚೀನಾದ ಅರ್ಧದಷ್ಟು ಪ್ರಮುಖ ನಗರಗಳಿಗೆ ಮುಳುಗುವ ಭೀತಿ ಎದುರಾಗಿದ್ದು, ಕೋಟ್ಯಂತರ ಜನರು ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ ಎಂದು ಅಧ್ಯಯನವೊಂದು ಹೇಳಿದೆ. ನೀರಿನ ಹೊರತೆಗೆಯುವಿಕೆ ಮತ್ತು ಬೃಹತ್‌ ಕಟ್ಟಡಗಳು ಹಾಗೂ ಹೆಚ್ಚುತ್ತಿರುವ ಮೂಲಸೌಕರ್ಯಗಳ...

error: Content is protected !!