ನವದೆಹಲಿ : ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಹೊಸ ನ್ಯಾಯಾಧೀಶರನ್ನು ಗುರುವಾರ ಸುಪ್ರೀಂ ಕೋರ್ಟ್ ಗೆ ನೇಮಕ ಮಾಡಲಾಗಿದೆ.
ಉನ್ನತ ನ್ಯಾಯಾಲಯದ ಹೊಸ ನ್ಯಾಯಾಧೀಶರಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರು ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿದ್ದಾರೆ. ಉಳಿದಂತೆ ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್, ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ, ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕಾ, ವಿಕ್ರಮ್ ನಾಥ್ ಮತ್ತು ಜಿತೇಂದ್ರ ಕುಮಾರ್ ಮಹೇಶ್ವರಿ ಕೂಡ ಸುಪ್ರೀಂ ಕೋರ್ಟ್ ಗೆ ನೇಮಕಗೊಂಡಿದ್ದಾರೆ.
ನಾಗರತ್ನಾ ತಂದೆಯೂ ನ್ಯಾಯಮೂರ್ತಿಯಾಗಿದ್ದರು:
1987ರಲ್ಲಿ ಬೆಂಗಳೂರಿನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ ನಾಗರತ್ನ ಅವರು 2008ರ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಎರಡು ವರ್ಷಗಳ ನಂತರ ಅವರಿಗೆ ನ್ಯಾಯಮೂರ್ತಿ ಸ್ಥಾನ ಖಾಯಂ ಮಾಡಲಾಯಿತು.
ನ್ಯಾಯಮೂರ್ತಿ ನಾಗರತ್ನ ಅವರ ತಂದೆ ಇ.ಎಸ್.ವೆಂಕಟರಾಮಯ್ಯ ಅವರು 1989ರಲ್ಲಿ ಆರು ತಿಂಗಳು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ನಾಗರತ್ನ ಅವರು 2027ರಲ್ಲಿ ಅಲ್ಪಾವಧಿಗೆ ಮುಖ್ಯ ನ್ಯಾಯಮೂರ್ತಿಯಾಗಿ ಹೊಣೆ ನಿರ್ವಹಿಸಲಿದ್ದಾರೆ.