Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮಿತಿ ಮೀರಿದ ಟೇಸ್ಟಿ ಪೌಡರ್ ಬಳಸಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ :ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

0


ಉಡುಪಿ: ಜಿಲ್ಲೆಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ಮಿತಿ ಮೀರಿದ ಟೇಸ್ಟಿ ಪೌಡರ್ ಬಳಕೆ ಕಂಡು ಬಂದಲ್ಲಿ ಅಂತಹ ಆಹಾರ ತಯಾರಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಆಹಾರ ಸುರಕ್ಷತೆ ಕುರಿತ ಜಿಲ್ಲಾ ಮಟ್ಟದ ಸಲಹಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೋಬಿಮಂಚೂರಿ, ಚೈನೀಸ್ ತಿನಿಸುಗಳು ಮುಂತಾದ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರುಚಿಯ ಹೆಚ್ಚಳಕ್ಕೆ ಟೇಸ್ಟಿ ಪೌಡರ್‍ನ ಬಳಕೆ ನಡೆಯುತ್ತಿದೆ, ಆದರೆ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇದನ್ನು ಬಳಸಿದ್ದಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದ್ದು, ಅಹಾರ ಸುರಕ್ಷತಾ ಅಧಿಕಾರಿಗಳು ಈ ಬಗ್ಗೆ ದಿಢೀರ್ ದಾಳಿ ನಡೆಸಿ, ಆಹಾರ ಪದಾರ್ಥಗಳ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿ, ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ, ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅಲ್ಲದೇ ಅನುಮತಿಯಿಲ್ಲದೇ ಅನಧಿಕೃತವಾಗಿ ಟೇಸ್ಟಿ ಪೌಡರ್ ಮಾರಾಟ ಮಾಡುವವರ ವಿರುದ್ದ ಸಹ ಕ್ರಮ ಕೈಗೊಳ್ಳುವಂತೆ ಹೇಳಿದರು.
ಜಿಲ್ಲೆಯ ಬೇಕರಿ ಉತ್ಪನ್ನಗಳ ಗುಣಮಟ್ಟ ಕುರಿತಂತೆ ನಿಯಮಿತವಾಗಿ ಪರಿಶೀಲನೆ ನಡೆಸಬೇಕು, ಆಹಾರ ಪದಾರ್ಥಗಳ ಪ್ಯಾಕೇಟ್ ಮೇಲೆ ಬಳಕೆಗೆ ನಿಗದಿತ ಯೋಗ್ಯ ದಿನಾಂಕ ನಮೂದಿಸಿರುವ ಕುರಿತು ಪರಿಶೀಲಿಸಬೇಕು, ಜಿಲ್ಲೆಯಾದ್ಯಂತ ಪ್ರತೀ ತಿಂಗಳು ನಿರ್ದಿಷ್ಟ ಸಂಖ್ಯೆಯ ವಿವಿಧ ಆಹಾರ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಸಲ್ಲಿಸಿ, ಅವು ಯಾವುದೇ ರೀತಿಯಲ್ಲಿ ಕಲುಷಿತವಾಗಿರದೇ, ಬಳಕೆಗೆ ಯೋಗ್ಯ ಇದೆಯೇ ಎಂಬ ಬಗ್ಗೆ ವರದಿ ಪಡೆಯುವಂತೆ ತಿಳಿಸಿದರು.
ಹಣ್ಣುಗಳನ್ನು ರಾಸಾಯನಿಕ ಸಿಂಪಡಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ, ಬಾಳೆ ಕಾಯಿಗಳು ಹಣ್ಣು ಮಾಡಲು ರಾಸಾಯನಿಕಗಳ ಬಳಕೆ ನಡೆಯುತ್ತಿದ್ದು ಅಂತಹ ಸ್ಥಳಗಳ ಮೇಲೆ ದಾಳಿ ನಡೆಸಿ, ಬಾಳೆಕಾಯಿ ಮಂಡಿಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ  ಜಿಲ್ಲಾ ಆಹಾರ ಸುರಕ್ಷತಾ  ಅಧಿಕಾರಿ ಡಾ.ಪ್ರೇಮಾನಂದ್  , ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್‍ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

error: Content is protected !!