Connect with us

Hi, what are you looking for?

Diksoochi News

ಕರಾವಳಿ

ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ತಂಬಾಕು ಮುಕ್ತ ಪ್ರದೇಶ :ಜಿಲ್ಲಾಧಿಕಾರಿ ಜಿ.ಜಗದೀಶ್

0

ಉಡುಪಿ: ಮಣಿಪಾಲದ ರಜತಾದ್ರಿಯಲ್ಲಿನ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಇಡೀ ಪ್ರದೇಶವನ್ನು ತಂಬಾಕು ಮುಕ್ತ ವಲಯವನ್ನಾಗಿ ಘೋಷಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳೂ ಸೇರಿದಂತೆ, ಕಚೇರಿಗಳಿಗೆ ಆಗಮಿಸುವ ಸಾರ್ವಜನಿಕರು, ಆವರಣದಲ್ಲಿ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಬಳಕೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಆವರಣದಲ್ಲಿನ ಕ್ಯಾಂಟೀನ್ ಹಾಗೂ ಇತರೆ ಮಳಿಗೆಗಳಲ್ಲಿ ಸಹ ಕಡ್ಡಾಯವಾಗಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಆಯಾ ಕಚೇರಿಯ ಮುಖ್ಯಸ್ಥರು ಘೋಷಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಈ ಪ್ರದೇಶಗಳಲ್ಲಿ ಆದೇಶ ಮೀರಿ ತಂಬಾಕು ಉತ್ಪನ್ನ ಬಳಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂದಪಟ್ಟ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ “ತಂಬಾಕು ಮುಕ್ತ ಹಳ್ಳಿ “ ಎಂದು ಘೋಷಣೆ ಮಾಡುವ ಕುರಿತಂತೆ ಎಲ್ಲಾ ತಾಲೂಕಿನ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಯಾವುದಾದರೂ ಒಂದು ಗ್ರಾಮವನ್ನು ಗುರುತಿಸಿ, ಆ ಪ್ರದೇಶದಲ್ಲಿ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಆ ಗ್ರಾಮದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ಮತ್ತು ಸಾರ್ವಜನಿಕರು ಅದರ ಬಳಕೆಯಿಂದ ದೂರವಾಗುವಂತೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಿ ಎಂದರು.
ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಸಂಸ್ಥೆಗಳನ್ನಾಗಿ ಮಾಡುವ ಉದ್ದೇಶದಿಂದ, ಶಿಕ್ಷಣ ಸಂಸ್ಥೆಗಳ 100 ಮೀಟರ್ ಒಳಗೆ ತುಂಬಾಕು ಉತ್ಪನ್ನಗಳ ಮಾರಾಟ ಅಥವಾ ಸೇವನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಸರಕಾರಿ ಮತ್ತು ಖಾಸಗಿ ಎಲ್ಲಾ ಶಿಕ್ಷಣ ಸಂಸ್ಥೆ ಗ ಳು ಕೈಗೊಂಡಿರುವ ಕ್ರಮಗಳ ಬಗ್ಗೆ, ಶಾಲಾ ಕಾಲೇಜು ಮುಖ್ಯಸ್ಥರಿಂದ ಸಂಬಂಧಪಟ್ಟ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ಪಡೆದು ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯ ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಕುರಿತಂತೆ ಮಣಿಪಾಲದ ಕೆಎಂಸಿ ಸಮುದಾಯದ ವೈದ್ಯಕೀಯ ವಿಭಾಗ ನಡೆಸಿದ ಸಮೀಕ್ಷೆ ವರದಿಯನ್ನು ಪರಿಶೀಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಉತ್ಪನ್ನ ಬಳಕೆಯಿರುವ ಶಾಲಾ ಕಾಲೇಜುಗಳನ್ನು ಗುರುತಿಸಿ, ಅಗತ್ಯ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಜುಲೈ ಅಂತ್ಯದವರೆಗೆ ಕೋಟ್ಪಾ ನಿಯಂತ್ರಣ ತನಿಖಾ ದಳದಿಂದ ಒಟ್ಟು 103 ಕಾನೂನು ಉಲ್ಲಂಘನೆ ಪ್ರಕರಣ ದಾಖಲಿಸಿ 17000 ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸವೇಕ್ರ್ಷಣಾಧಿಕಾರಿ ಡಾ.ನಾಗರತ್ನ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್‍ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!