Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರು : ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ; ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ

0

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.

ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಮೆರವಣಿಗೆಗೆ ಅವಕಾಶ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮನೋರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ, ಪ್ರತಿಷ್ಠಾಪನೆ ಮಾಡಬಹುದು. ಆದರೆ ಮೆರವಣಿಗೆ ಮಾಡುವಂತಿಲ್ಲ. ಮನರಂಜನಾ ಕಾರ್ಯಕ್ರಮಗಳಿಗೆ, ಸ್ಟೇಜ್ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಹೇಳಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!