ಬೆಳಗಾವಿ : ಬೆಳಗಾವಿ ಮಹಾನಗರ ಚುನಾವಣೆಯ ಮತ ಎಣಿಕೆ ಮುಗಿದಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ಗಳಿಗೆ ಬಿಜೆಪಿಯಿಂದ 55 ಅಭ್ಯರ್ಥಿಗಳು ಸ್ಪರ್ಧಿಸಿದ್ರೆ, ಕಾಂಗ್ರೆಸ್ನಿಂದ 45, ಜೆಡಿಎಸ್ನಿಂದ 11 ಹಾಗೂ ಎಂಇಎಸ್ನಿಂದ 21 ಮಂದಿ ಸ್ಪರ್ಧಿಸಿದ್ದು, ಆಪ್, ಪಕ್ಷೇತರರು ಸೇರಿದಂತೆ ಒಟ್ಟು 217 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಪೈಕಿ ಬಿಜೆಪಿ ಸದ್ಯ 30 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ 7, ಪಕ್ಷೇತರರು 5, ಎಐಎಂಐಎಂ 1 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿದ್ದಾರೆ. .
Advertisement. Scroll to continue reading.