Connect with us

Hi, what are you looking for?

Diksoochi News

ಕರಾವಳಿ

ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ನಿಧನ

0

ಮಂಗಳುರು : ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡೀಸ್ (80) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ ಬ್ಲೋಸಮ್ ಫೆರ್ನಾಂಡೀಸ್, ಪುತ್ರ ಹಾಗೂ ಪುತ್ರಿ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ ಅವರು, 1972 ರಲ್ಲಿ ಉಡುಪಿ ಪುರಸಭೆಗೆ ಆಯ್ಕೆ ಆದರು. ಜನವರಿ 18, 1980 ರಲ್ಲಿ ಟಿ ಎ ಪೈ ಅವರನ್ನು ಮಣಿಸಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಬಳಿಕ 2004ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!