ಉಡುಪಿ: ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ಖಖಿಉS/ಓಇಈಖಿ ಮೂಲಕ ನೇರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.
ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1 ರಲ್ಲಿ ಮಾಹಿತಿ ಹಾಗೂ ನಮೂನೆ -2 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3 ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು. ಕೋವಿಡ್ -19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಸಂಬಂಧಿಸಿದಂತೆ: ಕೋವಿಡ್ -19 ಪಾಸಿಟಿವ್ ರಿಪೆÇೀರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P Number (Patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.
ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯ ವರದಿ Number (Patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು
ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು
ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupi.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.