Connect with us

Hi, what are you looking for?

Diksoochi News

ಕರಾವಳಿ

ಕೋಟ : ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಸ್ತಾಂತರ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ : ಸುವರ್ಣ ಇಂಡಸ್ಟ್ರೀಸ್ ಯಡ್ತಾಡಿ ಹಾಗೂ ಶ್ರೀವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ-ಯಡ್ತಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾೈಬ್ರಕಟ್ಟೆ ಇದರ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಡುಗೆ ರೂಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪುಸ್ತಕವನ್ನು ಸ್ವೀಕರಿಸಿ ಮಾತಾನಾಡಿದ ಮುಖ್ಯೋಪಾಧ್ಯಾಯರಾದ ಸತೀಶ್ ನಾಯ್ಕ್ ರವರು ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪುಸ್ತಕವನ್ನು ಕೊಡುಗೆ ನೀಡಿರುವುದು ಶ್ಲಾಘನೀಯ, ಕನ್ನಡ ಶಾಲೆಗಳ ಅಭಿವೃದ್ಧಿ ಇಂತಹ ಸಂಸ್ಥೆಗಳ ಸಹಕಾರದಿಂದ ಸಾಧ್ಯ, ನಿಮ್ಮ ಸಂಸ್ಥೆಯಿಂದ ಇನ್ನಷ್ಟೂ ಸಮಾಜಮುಖಿ ಕಾರ್ಯ ನಡೆದು ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಸುವರ್ಣ ಇಂಡಸ್ಟ್ರೀಸ್‍ನ ಮಾಲಕರಾದ ಜಯಕರ್ ಸುವರ್ಣ, ಯುವಕ ಮಂಡಲದ ಪೂರ್ವಾಧ್ಯಕ್ಷ ಶಿವರಾಮ ಪೂಜಾರಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!