Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಅಧಿಕಾರಿಗಳಿಗೆ ಸನ್ಮಾನ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಪೊಲೀಸ್ ಇಲಾಖೆ ಮತ್ತು ಗ್ರಹರಕ್ಷಕ ದಳದಲ್ಲಿ ವಿಶೇಷ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರಿಂದ ಚಿನ್ನದ ಪದಕ ಪುರಸ್ಕೃತ ಅಧಿಕಾರಿಗಳಿಗೆ ಬ್ರಹ್ಮಾವರ ಗೃಹರಕ್ಷಕದಳ ಕಛೇರಿಯಲ್ಲಿ ಭಾನುವಾರ ಸನ್ಮಾನ ಕಾರ್ಯಕ್ರಮ ಜರುಗಿತು.

ಗ್ರಹ ರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ, ಕೆ ಪ್ರಶಾಂತ್ ಶೆಟ್ಟಿ ಅವರನ್ನು ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಅವರು ಸನ್ಮಾನಿಸಿದರು.
ಬಳಿಕ ಮಾತನಾಡಿದ ಅವರು, ಗ್ರಹ ರಕ್ಷಕ ದಳದವರು ನಮ್ಮ ಇಲಾಖೆಯ ಸಹೋದರ ಸಂಸ್ಥೆ. ಗ್ರಹ ರಕ್ಷಕ ದಳದ ಸಿಬ್ಬಂದಿಗಳು ವೃತ್ತಿಯಲ್ಲಿ ಕೀಳರಿಮೆ ಇರಿಸಿಕೊಳ್ಳದೆ, ನಾವು ಕೂಡಾ ಜನರ ರಕ್ಷಣೆ ಮತ್ತು ಶಾಂತಿ ಸುವ್ಯವಸ್ಥೆಗೆ ಶ್ರಮಿಸುವವರು ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ನಮ್ಮ ಇಲಾಖೆಯೊಂದಿಗೆ ಹಗಲಿರುಳು ದುಡಿಯುವ ಗ್ರಹ ರಕ್ಷಕ ದಳಕ್ಕೆ ಆದಷ್ಟು ಯುವಕರು ಸೇರ್ಪಡೆಯಾಗಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಇದೇ ವೇಳೆ ಚಿನ್ನದ ಪದಕ ಪುರಸ್ಕೃತ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭರವರನ್ನು ಮತ್ತು ಕಾಪು ಘಟಕಾಧಿಕಾರಿ ಲಕ್ಷ್ಮೀನಾರಾಯಣ್ ರಾವ್ ಇವರನ್ನು ಸನ್ಮಾನಿಸಲಾಯಿತು. ಡೆಪ್ಯೂಟಿ ಕಮಾಂಡೆಂಟ್ ರಮೇಶ್, ಬ್ರಹ್ಮಾವರ ಠಾಣಾ ಕ್ರೈಂ ಪಿ ಎಸ್ ಐ ಸುನಿತಾ, ಎ ಎಸ್ ಐ ಸುಂದರ, ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಲೂವಿಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!