ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಉಡುಪಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ,ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಹಾಗೂ ಗ್ರಾಮ ಪಂಚಾಯತ್ ವಾರಂಬಳ್ಳಿ ಇವರ ಸಹಯೋಗದೊಂದಿಗೆ ಪೋಷಣ್ ಅಭಿಯಾನ
ಪೋಷಣ್ ಮಾಸಾಚರಣೆ ಸೆಪ್ಟಂಬರ್- 2021
ಜಿಲ್ಲಾ ಮಟ್ಟದ ಸಮಾರೋಪ ಸಮಾರಂಭ ಬ್ರಹ್ಮಾವರ ನಾರಾಯಣಗುರು ಸಭಾಭವನದಲ್ಲಿ ಗುರುವಾರ ಜರುಗಿತು.
ಈ ಸಂದರ್ಭ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದ ಆಡಳಿತ ವೈದ್ಯಾಧಿಕಾರಿ ಡಾ| ಅಜಿತ್ ಕುಮಾರ್ ಶೆಟ್ಟಿ ಮಾತನಾಡಿ, ಪೌಷ್ಟಿಕ ಆಹಾರಗಳನ್ನು ನಿಯಮಿತವಾಗಿ ಸೇವಿಸಬೇಕು. ಕೇವಲ ಮಾಸಾಚರಣೆ ಮಾತ್ರವಾಗಿರದೆ ಪ್ರತೀ ದಿನವೂ ಪರಿಪೂರ್ಣ ಆಹಾರ ಸೇವನೆಯಿಂದ ಆರೋಗ್ಯ ಪೂರ್ಣ ಜೀವನ ಸಾಧ್ಯ ಎಂದರು.
ಕರ್ಜೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಮಾತನಾಡಿ, ಕೆಲವು ವರ್ಷದ ಹಿಂದೆ ಸರಕಾರದಲ್ಲಿ ಶಿಶು ಅಭಿವೃದ್ಧಿ ಯೋಜನೆಯಂತ ಇಲಾಖೆಗಳು ಇಲ್ಲದೆ ದೇಶದಲ್ಲಿ ಅಪೌಷ್ಠಿಕತೆ ಇರುವ ಜನಾಂಗ ನಿರ್ಮಾಣವಾಗಿತ್ತು. ಆದರೆ ಈಗ ಮಕ್ಕಳ ಜನನ ಪಾಲನೆ ಪೋಷಣೆಗೆ ಸರಕಾರ ಹೆಚ್ಚು ಮಹತ್ವ ನೀಡುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಗರ್ಬಿಣಿ ಮಹಿಳೆಯರಿಗೆ ಸೀಮಂತ, ಮಕ್ಕಳಿಗೆ ಅನ್ನ ಪ್ರಾಶನ, ಅಪೌಷ್ಠಿಕ ಮಕ್ಕಳಿಗೆ ಕಿಟ್ ವಿತರಣೆ ಮಾಡಲಾಯಿತು. ನಾನಾ ಭಾಗದ ಅಂಗನವಾಡಿ ಕಾರ್ಯಕರ್ತೆಯರಿಂದ ಪೌಷ್ಟಿಕ ಆಹಾರದ ಪ್ರದರ್ಶನ ಸಾರ್ವಜನಿಕರ ಗಮನಸೆಳೆಯಿತು.
ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ.
ಮಹಿಳಾಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಆರ್., ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯ್ಕ್ ,ಉಡುಪಿ ತಾಲೂಕು ಆರೋಗ್ಯಧಿಕಾರಿ ಡಾ| ವಾಸುದೇವ ಉಪಾಧ್ಯಾಯ, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ| ನೀತಾ, ಎನ್. ಆರ್.ಎಲ್.ಎಂ ಪ್ರಭಾಕರ ಆಚಾರ್ಯ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಫರ್ಜಾನಾ ಎಂ ., ಉಪಾಧ್ಯಕ್ಷ ಸದಾನಂದ ಪೂಜಾರಿ, ಉದ್ಯಮಿ ಚೇತನ್ ಕುಮಾರ್ ಶೆಟ್ಟಿ , ಎಸ್ ನಾರಾಯಣ್ ಇನ್ನಿತರರು ಉಪಸ್ಥಿತರಿದ್ದರು.