ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಗೋ ಹತ್ಯೆ ವಿರೋಧಿಸಿ ಮತ್ತು ಗೋ ಹಂತಕರನ್ನು ಗಡಿಪಾರು ಮಾಡಲು ಒತ್ತಾಯಿಸಿ ಗಂಗೊಳ್ಳಿಯಲ್ಲಿ ಹಿಂದು ಸಂಘಟನೆಗಳಿಂದ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ವತಿಯಿಂದ ಗೋಹತ್ಯೆ ವಿರೋಧಿಸಿ ಕರೆ ನೀಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗಿಯಾದರು. ಶುಕ್ರವಾರ ಬೆಳಿಗ್ಗೆ ಪೋರ್ಟ್ ಆಫೀಸ್ ಬಳಿಯಿಂದ ಕಾಲ್ನಡಿಗೆ ಮೆರವಣಿಗೆ ಆರಂಭವಾಗಿ ರಾಮಮಂದಿರದ ತನಕ ಸಾಗಿತು. ಬಳಿಕ ಗಂಗೊಳ್ಳಿ ವಿರೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನೆ ವೇಳೆ ಗೋಹತ್ಯೆಗೆ ಆರೋಪಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಯಿತು. ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಗೋಕಳ್ಳರ ವಿರುದ್ಧ ಆಕ್ರೋಷದ ಘೋಷಣೆಗಳು ಕೇಳಿಬಂದವು. ಪ್ರತಿಭಟನೆಯಲ್ಲಿ ಮಹಿಳೆಯರು ಪಾಲ್ಘೊಳ್ಳುವಿಕೆ ಹೆಚ್ಚು ಕಂಡುಬಂದಿತ್ತು. ಗಂಗೊಳ್ಳಿ ಪೇಟೆ ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು.
ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ನೇತೃತ್ವದಲ್ಲಿ ಡಿವೈಎಸ್ಪಿ ಶ್ರೀಕಾಂತ್, ಬೈಂದೂರು ಸಿಪಿಐ ಸಂತೋಷ್ ಕಾಯ್ಕಿಣಿ, ಸಹಿತ ಹಲವು ಇನ್ಸ್‌ಪೆಕ್ಟರ್, ಪಿಎಸ್ಐಗಳು ಪೊಲೀಸ್ ಭದ್ರತೆ ಒದಗಿಸಿದ್ದರು.
ಈ ಸಂದರ್ಭ ಗೋಹತ್ಯೆಗೆ ಆರೋಪಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ಆಕ್ರೋಶ ಕೇಳಿ ಬಂತು. ಗೋಹತ್ಯೆ ಆರೋಪಿಗಳನ್ನು ಗಡಿಪಾರಿಗೆ ಒತ್ತಾಯಿಸಲಾಯಿತು. ಈ ಸಂದರ್ಭ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದ್ದು,
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.