ಶ್ರೀನಗರ : ಶ್ರೀನಗರದ ಈದ್ಗಾ ಪ್ರದೇಶದಲ್ಲಿ ಇಂದು ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ.
ಬೆಳಿಗ್ಗೆ 11.15ರ ಸುಮಾರಿಗೆ, ಸಂಗಮ್ ಈದ್ಗಾದಲ್ಲಿ ಭಯೋತ್ಪಾದಕರು ಇಬ್ಬರು ಶಾಲಾ ಶಿಕ್ಷಕರನ್ನು ಗುಂಡಿಕ್ಕಿ ಕೊಂದಿದ್ದು, ಸದ್ಯ ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರಿದಿದೆ ಎಂಬುದು ತಿಳಿದುಬಂದಿದೆ. ಶ್ರೀನಗರ ಮತ್ತು ಬಂಡಿಪೋರಾದಲ್ಲಿ ಮೂವರು ನಾಗರಿಕರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಉಗ್ರರು ಶ್ರೀನಗರದ ಸಫಾ ಕಾದಲ್ ಪ್ರದೇಶದ ಶಾಲೆಯ ಶಿಕ್ಷಕರನ್ನು ಹತ್ಯೆ ಮಾಡಿದೆ ಎಂದು ತಿಳಿದು ಬಂದಿದೆ.
Advertisement. Scroll to continue reading.