ದೆಹಲಿ : ಲಖೀಂಪುರ ಖೇರ್ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ವಿವರವಾದ ಸ್ಥಿತಿ ವರದಿ ಸಲ್ಲಿಸಲು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮನವಿ ಮಾಡಿದೆ.
ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆಗೆ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ, ಪ್ರಕರಣದಲ್ಲಿ ಆರೋಪಿಗಳು ಯಾರು, ಯಾರ ವಿರುದ್ಧ ಎಫ್ಐಆರ್ ದಾಖಲಾಗಿದೆ ಮತ್ತು ಬಂಧಿತರು ಯಾರು ಎಂಬುದರ ಕುರಿತು ನಾಳೆಯೊಳಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಭೇಟಿಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹತ್ಯೆಗೀಡಾದ ಎಂಟು ಮಂದಿಯನ್ನು ಉಲ್ಲೇಖಿಸಿದ ನ್ಯಾಯಾಲಯ, ಘಟನೆಯ ಕುರಿತಾಗಿ ಕೈಗೊಂಡಿರುವ ನಿರ್ದಿಷ್ಟ ಕ್ರಮದ ಕುರಿತು ನಾಳೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸರ್ಕಾರವನ್ನು ಕೇಳಿದೆ.
Advertisement. Scroll to continue reading.
In this article:Diksoochi news, diksoochi Tv, diksoochi udupi, supreme Court, uttar pradesh
Click to comment