ಹಾಸನ : ಅಕ್ಟೋಬರ್ 28 ರಿಂದ ಪ್ರಸಿದ್ಧ ಹಾಸನಾಂಬ ದೇವಾಲಯ ಬಾಗಿಲು ತೆರೆಯಲಿದ್ದು, ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಈ ವರ್ಷವೂ ಸಾರ್ವಜನಿಕರಿಗೆ ದೇವಾಲಯ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸರಳ ರೀತಿಯ ಆಚರಣೆಗೆ ಕಂದಾಯ, ಪೊಲೀಸ್ ಮತ್ತು ಮುಜರಾಯಿ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಭಕ್ತರರಿಗೆ ಪ್ರವೇಶವಕಾಶ ಕಲ್ಪಿಸಲಾಗುತ್ತಿಲ್ಲ, ಜತೆಗೆ ದೇಗುಲದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹೊರತಾಗಿ ಅವರ ಕುಟುಂಬಕ್ಕೂ ಪ್ರವೇಶ ಇರುವುದಿಲ್ಲ. ಶಾಂತಿಯುತವಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.
Advertisement. Scroll to continue reading.