ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಹೆಚ್ಚಿನ ಎಲ್ಲಾ ಕ್ಷೇತ್ರಗಳು ಪ್ರಗತಿ ಕಾಣದಿದ್ದರೂ 2 ವರ್ಷದಿಂದ ಕೃಷಿ ಕ್ಷೇತ್ರದಿಂದ ಆದಾಯ ಹೆಚ್ಚಿದೆ. ಇದು ಒಳ್ಳೆ ಬೆಳವಣಿಗೆ ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.
ಶುಕ್ರವಾರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತುತೋಟಗಾರಿಕೆ ಸಂಶೋಧನಾ ಕೇಂದ್ರ,ಬ್ರಹ್ಮಾವರದಲ್ಲಿ ಕೃಷಿ ಮಹೋತ್ಸವ -2021 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಕ್ಷೇತ್ರ ತನ್ನ ವ್ಯಾಪಕತೆಯನ್ನು ವಿಸ್ತರಿಕೊಂಡಿದ್ದು, ಹೆಚ್ಚು ಜನ ಕೃಷಿಯ ಕಡೆಗೆ ಆಕರ್ಷಿತರಾಗಿ, ಈ ಬಾರಿ ಜಿಲ್ಲೆಯಲ್ಲಿ ಶೇ.7 ರಷ್ಟು ಹೆಚ್ಚು ಬಿತ್ತನೆ ನಡೆದಿದೆ. ಉಡುಪಿ ಶಾಸಕ ರಘುಪತಿ ಭಟ್ ಹಡಿಲು ಭೂಮಿ ಕೃಷಿ ಆಂದೋಲನದಿಂದ ದೇಶದ ಗಮನ ಸೆಳೆದಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಕಜೆ 25-9 ತಳಿಗಳನ್ನು ಸಚಿವರು ಬಿಡುಗಡೆಗೊಳಿಸಿದರು.ಭತ್ತದ ಕೃಷಿಯಲ್ಲಿ ಯಾಂತ್ರಿಕತೆ ಬಳಸಿಕೊಂಡ ಯಶಸ್ವಿ ರೈತರನ್ನು ಸನ್ಮಾನಿಸಲಾಯಿತು.ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂಧ ಪೂಜಾರಿ, ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳಾದ ದೊಡ್ಡೇಗೌಡ ಸಿ ಪಾಟೀಲ್, ವೀರಭದ್ರಪ್ಪ ಪೂಜಾರಿ, ಬಿ.ಶಿವರಾಮ್, ಕೆ ನಾಗರಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಶಂಕರ್ ಶೆಟ್ಟಿ ಮತ್ತು ಕೃಷಿ ಮತ್ತು ತೋಟಗಾರಿಕೆ ವಿವಿಯ ಶಿಕ್ಷಣ ನಿರ್ದೇಶಕ ಎಂ ಹನುಮಂತಪ್ಪ, ಆಡಳಿತಾಧಿಕಾರಿ ಜಿ.ಕೆ. ಗಿರಿಜೇಶ್, ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ಸಿ. ವಾಲಿ, ವಿದ್ಯಾರ್ಥಿ ಕಲ್ಯಾಣದ ಡೀನ್ ಡಾ ಎನ್ ಶಿವಶಂಕರ್,ಪ್ರಗತಿಪರ ಕೃಷಿಕ ಯಡ್ತಾಡಿ ಸತೀಶ್‍ಕುಮಾರ್ ಶೆಟ್ಟಿ ಉಪಸ್ಥಿತರಿದ್ಧರು.
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಹ ಸಂಶೋಧನಾ ನಿರ್ದೇಶಕಡಾ. ಲಕ್ಷ್ಮಣ ಸ್ವಾಗತಿಸಿ, ಹಿರಿಯ ಕ್ಷೇತ್ರ ಅಧೀಕ್ಷಕಡಾ.ಶಂಕರ್ ಎಂ ನಿರೂಪಿಸಿ, ಹಿರಿಯ ವಿಜ್ಞಾನಿ ಡಾ. ಧನಂಜಯ ಬಿ ವಂದಿಸಿದರು.