ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.
ಐವರು ಕಾಮುಕರು ಅಪ್ರಾಪ್ತೆಯನ್ನು ಅಪಹರಿಸಿ ಮತ್ತು ಬರಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಸದ್ಯ ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶುಕ್ರವಾರ ಬೆಳಗ್ಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 16 ವರ್ಷ ವಯಸ್ಸಿನ ವಿದ್ಯಾರ್ಥಿನಿಯನ್ನು ಪರಿಚಿತ ಯುವಕನೊಬ್ಬ ಅಪರಿಚಿತರೊಂದಿಗೆ ಬಂದು ಕಿಡ್ನಾಪ್ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.