Connect with us

Hi, what are you looking for?

ಕರಾವಳಿ

ಗಂಗೊಳ್ಳಿ : ಮೀನು ಖರೀದಿಸದಿರುವ ಮೂಲಕ ಬಡ ಮೀನುಗಾರರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಸರಿಯಲ್ಲ: ಸದಾನಂದ ಉಪ್ಪಿನಕುದ್ರು

0

ವರದಿ : ದಿನೇಶ್ ರಾಯಪ್ಪನಮಠ

ಗಂಗೊಳ್ಳಿ : ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಹಿಂದು ಸಮಾಜ ಒಗ್ಗಟ್ಟಿನಿಂದ ಭಾಗವಹಿಸಿ ಪ್ರತಿಭಟನೆ ನಡೆಸಿತ್ತು. ಈ ಪಾದಯಾತ್ರೆಯಲ್ಲಿ ಮಹಿಳಾ ಮೀನುಗಾರರು, ಮೀನು ಮಾರಾಟ ಮಾಡುವ ಮಹಿಳೆಯರು, ತಾಯಂದಿರು ಪಾಲ್ಗೊಂಡಿದ್ದರು ಎಂಬ ಒಂದೇ ಉದ್ದೇಶದಿಂದ ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು, ಮೀನು ಖರೀದಿಗೆ ಬಂದ ಅನ್ಯಕೋಮಿನ ಜನರನ್ನು ತಡೆದು ಮೀನು ಖರೀದಿಸದಂತೆ ತಡೆಯುತ್ತಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹೇಳಿದರು.
ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ಹಮ್ಮಿಕೊಂಡಿರುವ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಹೊಟ್ಟೆಪಾಡಿಗೆ, ದೈನಂದಿನ ಜೀವನ ನಡೆಸಲು ಮೀನು ಮಾಡುತ್ತಿರುವ ಮೀನುಗಾರರಿಂದ ಒಂದೇ ಸಮನೆ ಮೀನು ಖರೀದಿಗೆ ಬಹಿಷ್ಕಾರ ಹಾಕುವ ಮೂಲಕ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಅನ್ಯಕೋಮಿನವರ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಅನ್ಯಕೋಮಿನವರ ಆರ್ಥಿಕ ಬಹಿಷ್ಕಾರದ ಪ್ರಯತ್ನವನ್ನು ಧಿಕ್ಕರಿಸುವ ನಿಟ್ಟಿನಲ್ಲಿ, ಮಹಿಳಾ ಮೀನುಗಾರರಲ್ಲಿ ಆತ್ಮಸ್ಥೈರ್ಯ ನೀಡಿ ಬೆಂಬಲ ನೀಡುವ ಹಾಗೂ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶವನ್ನು ಸಾರುವ ಉದ್ದೇಶದಿಂದ ಬೈಂದೂರು ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆ ಹಾಗೂ ಕ್ಷೇತ್ರದ ಬೇರೆ ಬೇರೆ ಭಾಗಗಳಿಂದ ಜನರು ಗಂಗೊಳ್ಳಿಗೆ ಬಂದು ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಕಾರ್ಯ ನಿರಂತರವಾಗಿ ನಡೆಯಲಿದೆ. ಇದು ಯಾರ ವಿರುದ್ಧವೂ ಅಲ್ಲ, ಪ್ರತಿಭಟನೆಯೂ ಅಲ್ಲ ಎಂದರು.


ಈ ಸಂದರ್ಭ ಬೈಂದೂರು ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸಂತೋಷ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಣೇಶ ದೇವಾಡಿಗ ಮತ್ತು ಚಂದ್ರ ಜೋಗಿ, ಕಾರ್ಯದರ್ಶಿ ಉಮೇಶ ಮೊಗವೀರ, ಸಂತೋಷ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಪ್ರ.ಕಾರ್ಯದರ್ಶಿ ಗೋಪಾಲ ಕಾಂಚನ್, ನಾರಾಯಣ ಖಾರ್ವಿ, ರವಿ ಗಾಣಿಗ ಕೆಂಚನೂರು, ಸುಕುಮಾರ್ ನೆಂಪು, ಸತೀಶ ಕುಲಾಲ್, ಕೃಷ್ಣ ಪೂಜಾರಿ, ತಾಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಸುರೇಶ ಮೂಡುಬಗೆ, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯೆ ಶಾಂತಿ ಖಾರ್ವಿ, ಬಿಜೆಪಿ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

0 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

0 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!