ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಟ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಲಾಗಿದೆ. ಡ್ರಗ್ಸ್ ಪಾರ್ಟಿ ಸಂಬಂಧಪಟ್ಟಂತೆ ಎನ್ ಸಿ ಬಿ ಬಂಧಿಸಿತ್ತು. ಈ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದಂತಹ ಮುಂಬೈನ ಕಿಲ್ಲಾ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು.
ಅಲ್ಲದೇ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಬಳಿಕ ಮುಂಬೈನ ಎನ್ ಡಿ ಪಿ ಎಸ್ ವಿಶೇಷ ಕೋರ್ಟ್ ಗೆ ಜಾಮೀನಿಗಾಗಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.
Advertisement. Scroll to continue reading.