Connect with us

Hi, what are you looking for?

Diksoochi News

ಕರಾವಳಿ

ಕೋಟ : ಈಜು ಸ್ಪರ್ಧೆ : ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಕರ್ನಾಟಕ ರಾಜ್ಯ ಸ್ವಿಮ್ಮಿಂಗ್ ಅಸೋಸಿಯೇಷನ್ ನಡೆಸಿದ 22 ನೇಯ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರು 100ಮೀ ಫ್ರೀ ಸ್ಟೈಲ್‍ನಲ್ಲಿ ಚಿನ್ನದ ಪದಕ, 200 ಮೀಟರ್ ಫ್ರೀ ಸ್ಟೈಲ್‍ನಲ್ಲಿ ಚಿನ್ನದ ಪದಕ, 4×50 ಮೀ ಫ್ರೀ ಸ್ಟೈಲ್ ರಿಲೇಯಲ್ಲಿ ಚಿನ್ನದ ಪದಕ, 4×50 ಮೀ ಮೆಡ್ಲೆ ರಿಲೇಯಲ್ಲಿ ಚಿನ್ನದ ಪದಕ,
100 ಮೀ ಬಟರ್ ಫ್ಲೈ ನಲ್ಲಿ ಬೆಳ್ಳಿಪದಕ
50 ಮೀ ಫ್ರೀ ಸ್ಟೈಲ್ ನಲ್ಲಿ ಕಂಚಿನ ಪದಕ ಪಡೆದು
ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉಡುಪಿಯ ಅಜ್ಜರಕಾಡು ಈಜುಕೊಳದ ತರಬೇತುದಾರರಾಗಿದ್ದಾರೆ. 2013ರಲ್ಲಿ ಕೈ ಕಾಲುಗಳಿಗೆ ಕೋಳದಿಂದ ಬಂಧಿಸಿಕೊಂಡು ಅರಬ್ಬಿ ಸಮುದ್ರದಲ್ಲಿ 3.71 ಕಿ.ಮೀ ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಇವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಸಂದೇಶ ಪ್ರಶಸ್ತಿ ಇನ್ನಿತರ ಹಲವಾರು ಪ್ರಶಸ್ತಿ ಪಡೆದಿದ್ದಾರೆ. ಕರ್ಣಾಟಕ ರಾಜ್ಯದ ಒಂಬತ್ತನೆಯ ತರಗತಿಯ ಕೊಂಕಣಿ ಪಠ್ಯಪುಸ್ತಕದಲ್ಲಿ ಇವರ ಜೀವನ ಚರಿತ್ರೆಯ ಪಾಠವಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!