ಮುಂಬೈ: ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವಂತಹ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ಈ ಮೂಲಕ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತಾಗಿದೆ.
ಮುಂಬೈನ ಕಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.
ಈ ಜಾಮೀನು ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದ್ದಂತ ಎನ್ ಡಿ ಪಿ ಎಸ್ ಕೋರ್ಟ್, ಇಂದಿಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತನ್ನ ತೀರ್ಪು ಪ್ರಕಟಿಸಿರುವಂತ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ಆರ್ಯನ್ ಖಾನ್, ಅರ್ಬಜ್ ಮರ್ಚೆಂಟ್ ಹಾಗೂ ಮನ್ಮುಡು ದಮಚ್ಚಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
Advertisement. Scroll to continue reading.
In this article:Aryan khan, Diksoochi news, diksoochi Tv, diksoochi udupi, sharukh khan
Click to comment