ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ ?
Advertisement. Scroll to continue reading.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
In this article:Diksoochi news, diksoochi Tv, diksoochi udupi, karavali, rain in karnataka
Click to comment