ವರದಿ : ದಿನೇಶ್ ರಾಯಪ್ಪನಮಠ
ಕೋಟ : ಕಾನೂನಿನ ಚೌಕಟ್ಟಿನಲ್ಲಿ ಶೋಷಣೆಗೆಗೆ ಒಳಗಾದವರಿಗೆ ಪ್ರಾಮಾಣಿಕವಾಗಿ ನ್ಯಾಯ ದೊರಕುವಂತಗಾಬೇಕು ಸಮಾಜದ ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕಾರ್ಯವೆಸಗಿದಾಗ ಅನ್ಯಾಯದ ವಿರುದ್ದ ಧ್ವನಿ ಎತ್ತಿದಾಗ ಇದು ಸಾಧ್ಯ, ಕಾನೂನಿನ ರ್ದುಬಳಕೆ ಮಾಡಿಕೊಳ್ಳದೇ ಕಾನೂನಿನ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ನಾಗರಿಕರು ಮುಂದೆ ಬಂದು , ಕಾನೂನಿನ ಉದ್ದೇಶದ ತಿಳುವಳಿಕೆ ಪಡೆದುಕೊಂಡು ಅದರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಕುಂದಾಪುರ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸಮಿತಿ ಅಧ್ಯಕ್ಷರಾದ ರಂಗೇಗೌಡ ಅವರು ಹೇಳಿದರು.
ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಟಿ ರೋಟರಿ ಕೋಟ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ 75 ನೇ ಸ್ವಾತಂತ್ರೋತ್ಸವದ ಆಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ NALSA ‘Pan India Awareness And Outreach’ ಬಗ್ಗೆ “ ಉಚಿತ ಕಾನೂನು ಅರಿವು-ನೆರವು ಮಾಹಿತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಅಂಜಲಿ ಚಂದ್ರಕಾಂತ ಹುಂಡೇಕರ್ ಮಹಿಳೆಯರಿಗೆ ಕಾನೂನಿನ ಅರಿವು ಅತೀ ಮುಖ್ಯ, ಪ್ರಸ್ತುತ ಸನ್ನೀವೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿ ವಿಷಯ, ಮಹಿಳೆಯರು ಇಂತಹ ಸಂದರ್ಭದಲ್ಲಿ ಎದೆಗುಂದದೆ ಧೈರ್ಯವಾಗಿ ಮುಂದೆ ಬಂದು ಅಪರಾಧಿಗಳಿಗೆ ಸೂಕ್ತ ಶಿಕ್ಷೆ ನೀಡುವ ಹಾಗೆ ಪಣ ತೋಡಬೇಕು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ನೆರವಿಗೆ ಸಮಾಜ ಪೂರಕವಾಗಿ ಸ್ಪಂದಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾರ್ ಅಸೋಸಿಯೇಶನ್ ಕುಂದಾಪುರ ಇದರ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗ್ಡೆ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕೋಟ ಪೋಲಿಸ್ ಠಾಣಾಧಿಕಾರಿ ಸಂತೋಷ್ ಬಿ.ಪಿ, ಕೋಟ ವಲಯದ ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ ಉಪಸ್ಥಿತರಿದ್ದರು.
ಬಾರ್ ಅಸೋಸಿಯೇಶನ್ ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿ ಎಚ್ ಪ್ರಮೋದ್ ಹಂದೆ ಸ್ವಾಗತಿಸಿ-ಪ್ರsಸ್ತಾವನೆ ಸಲ್ಲಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ಎಸ್ ಪೂಜಾರಿ ವಂದಿಸಿದರು. ಕಾರ್ಯಕ್ರಮವನ್ನು ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ನಿರೂಪಿಸಿದರು.