Connect with us

Hi, what are you looking for?

Diksoochi News

ರಾಜ್ಯ

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

0

ಉಡುಪಿ: ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು.
ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಸೂಚನೆಗಳನ್ನು ನೀಡಿದರು.


ಎಲ್ಲಾ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಸಚಿವರು, ಇದನ್ನು ಸರ್ಕಾರಿ ಕಾರ್ಯಕ್ರಮವಾಗಿ ಮಾತ್ರ ನಡೆಸದೇ ಎಲ್ಲಾ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭೂತಪೂರ್ವವಾಗಿ ಆಯೋಜಿಸಿ, ಎಲ್ಲಾ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಆನ್ ಲೈನ್ ಮೂಲಕ ಸಹ ವೀಕ್ಷಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಿ, ಕಾರ್ಯಕ್ರಮದ ಸಂಪೂರ್ಣ ವೀಡಿಯೋ ಚಿತ್ರೀಕರಣ, ಡ್ರೋಣ್ ಚಿತ್ರೀಕರಣ, ಕಾರ್ಯಕ್ರಮದಲ್ಲಿ ಭಾಗವಹಿsಸುವ ಜನಸಂಖ್ಯೆಯ ವಿವರ ಎಲ್ಲವನ್ನೂ ವ್ಯವಸ್ಥಿತ ರೀತಿಯಲ್ಲಿ ದಾಖಲೀಕರಣ ಮಾಡುವಂತೆ ಸೂಚಿಸಿದರು.
ಕಾರ್ಯಕ್ರಮ ಆಯೋಜಿಸುವಾಗ ಆರಂಭದಲ್ಲಿ ಯಾವುದೇ ಭಾಷಣ ಕಾರ್ಯಕ್ರಮ ಮಾಡಬೇಡಿ, 10.45 ಕ್ಕೆ ನಿಗದಿತ ಜಾಗದಲ್ಲಿ ಸಮಾಪನಗೊಂಡು , ಸರಿಯಾಗಿ 11 ಗಂಟೆಗೆ ಹಾಡಲು ಆರಂಭಿಸಬೇಕು. ಈ 3 ಗೀತೆಗಳ ಜೊತೆಗೆ ಕನ್ನಡ ನಾಡು ನುಡಿಯ ಮಹತ್ವ ಇರುವ ಇತರೆ ಗೀತೆಗಳನ್ನು ಹಾಡಬಹುದಾಗಿದ್ದು, ಕೊನೆಯಲ್ಲಿ ಕನ್ನಡದ ಬಳಕೆ ಕುರಿತು ಸಂಕಲ್ಪ ಮಾಡಬೇಕು ಎಂದು ಸಚಿವರು ಹೇಳಿದರು.
ವಿಮಾನ ನಿಲ್ದಾಣ ಮುಂಭಾಗ, ಮೆಟ್ರೋದಲ್ಲಿ, ಆಟೋ ರಿಕ್ಷಾ ಸಂಘಗಳಲ್ಲಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ , ಮಾಲ್‍ಗಳಲ್ಲಿ, ವಸತಿ ಸಮುಚ್ಛಯಗಳಲ್ಲಿ , ರಾಜ್ಯದ ಗಡಿ ನಾಡ ಜಿಲ್ಲೆಗಳಲ್ಲಿ ಮತ್ತು ಗಡಿ ಭಾಗದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಚಿವರು ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಶ್ರೀ ಕೃಷ್ಣ ಮಠದ ಮುಂಭಾಗ, ಮಲ್ಪೆ ಸೀ ವಾಕ್ , ಮಲ್ಪೆ ಸಮುದ್ರದಲ್ಲಿ ದೋಣಿಯಲ್ಲಿ, ಕಾಪು ಲೈಟ್ ಹೌಸ್, ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್, ಕೊಲ್ಲೂರು ದೇವಾಲಯ ಮುಂಭಾಗ, ಕಾರ್ಕಳ ಗೊಮ್ಮಟ ಬೆಟ್ಟದ ಬಳಿ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಕೈಗಾರಿಕೆಗಳು, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಗೂ ಎಲ್ಲಾ ಪಂಚಾಯತ್‍ಗಳು, ಜಿಲ್ಲೆಯಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‍ಗಳ ಪ್ರಾದೇಶಿಕ ಕಚೇರಿಗಳಲ್ಲಿ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಸಹ ಕಾರ್ಯಕ್ರಮ ಆಯೋಜಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ಅರೆ ಹೌದಾ!

0 ದಿನಾ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಳಿಸಿದ್ದಾರೆ. ಛತ್ತೀಸ್‌ಗಢದ ಬಸ್ತಾರ್‌ನಲ್ಲಿರುವ ಶಾಲೆಯ ಶಿಕ್ಷರೊಬ್ಬರು ದಿನಾ...

error: Content is protected !!