ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಜಿ. ಎಮ್. ವಿದ್ಯಾನೀಕೆತನ್ ಪಬ್ಲಿಕ್ ಸ್ಕೂಲ್‍ನಲ್ಲಿ ರಾಜ್ಯೋತ್ಸವದ ಅಭಿಯಾನದ ಅಂಗವಾಗಿ ‘ಲಕ್ಷ ಕಂಠ ಗೀತ ಗಾಯನ’ ಕಾರ್ಯಕ್ರಮ ಜರುಗಿತು.
ಕನ್ನಡ ಪತಾಕೆಯನ್ನು ಹಿಡಿದು ಸಂಸ್ಥೆಯ ಸಹಸ್ರಾರು ವಿದ್ಯಾರ್ಥಿಗಳು ಬಾರಿಸು ಕನ್ನಡಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಯನ್ನು ಏಕಕಾಲದಲ್ಲಿ ಹಾಡಿ ಕನ್ನಡ ಪ್ರೇಮವನ್ನು ಮೆರೆದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕನ್ನಡರಾಜ್ಯೋತ್ಸವಕ್ಕೆ ಶುಭ ಹಾರೈಸಿ ಮಾತನಾಡಿ, ನಾವು ಜೀವನದಲ್ಲಿ ಸಾಧನೆಯನ್ನು ಮಾಡಲು, ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಕನ್ನಡದಜೊತೆಇತರ ಭಾಷೆಗಳನ್ನು ಕಲಿಯಬೇಕು.ಯಾವುದೇ ಕಾರಣಕ್ಕೂ ನಮ್ಮ ನೆಲ, ಜಲ, ಭಾಷೆಯ ಮೇಲೆ ಅಭಿಮಾನ ಕಳೆದುಕೊಳ್ಳಬಾರದು. ನಾವೆಲ್ಲರೂ ಭಾರತೀಯರು ಎನ್ನುವ ಭಾವನೆ ಕೂಡಾ ಇರಬೇಕು ಎಂದರು.
ಶಾಲಾ ಉಪಪ್ರಾಂಶುಪಾಲ ಪ್ರಣವ್ ಶೆಟ್ಟಿ, ಶಿಕ್ಷಕವೃಂದ, ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ರಾಜ್ಯೋತ್ಸವ

Click to comment