ಪಡುಬಿದ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯಾದಾದ್ಯಾಂತ ಆಯೋಜಿಸಲಾದ ‘ಮಾತಾಡ್ ಮಾತಾಡ್ ಕನ್ನಡ’ ಕನ್ನಡಕ್ಕಾಗಿ ನಾವು, ಕರ್ನಾಟಕ ರಾಜ್ಯೋತ್ಸವ ಅಭಿಯಾನ ದ ಪ್ರಯುಕ್ತ ‘ಕನ್ನಡ ಗೀತ ಗಾಯನ’ ಕಾರ್ಯಕ್ರಮವು ಇಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಅದಮಾರಿನಲ್ಲಿ ನಡೆಯಿತು.
ಪಾಂಶುಪಾಲ ಎಂ. ರಾಮಕೃಷ್ಣ ಪೈ ಮಾತನಾಡಿ, ಉಚ್ಚಾರ ಸ್ವಷ್ಟತೆಯೊಂದಿಗೆ ಬರೆದಂತೆ ಓದುವ ಹಾಗೂ ಓದಿದಂತೆ ಬರೆಯಲ್ಪಡುವ ಭಾಷೆ ಕನ್ನಡ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕಲಿಯಲು ಹಲವು ಭಾಷೆಗಳಿದ್ದರೂ, ವ್ಯವಹರಿಸಲು ಮಾತೃ ಭಾಷೆಯೇ ಇರಲಿ ಎಂದರು.

ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಕಾಂತ್ ರಾವ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಉಪಪ್ರಾಂಶುಪಾಲೆ ಡಾ.ಒಲ್ವಿಟಾ ಡಿಸೋಜ, ಮಾಜಿ ಪ್ರಾಂಶುಪಾಲ ಹಾಗೂ ಗೌರವ ಆಂಗ್ಲ ಭಾಷಾ ಉಪನ್ಯಾಸಕ ಬಿ. ಆರ್. ನಾಗರತ್ನ,ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ನಾಯಕ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನಿಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ಜೋಗದ ಸಿರಿ ಬೆಳಕಿನಲ್ಲಿ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಕನ್ನಡದ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು. ಕನ್ನಡ ಉಪನ್ಯಾಸಕ ಶ್ರೀ ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಡಾ. ಜಯಶಂಕರ್ ಕಂಗಣ್ಣಾರು ವಂದಿಸಿದರು.
