ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯ ಸಮಸ್ಯೆಗಳು, ಸವಾಲುಗಳ ಕುರಿತು ಪತ್ರಕರ್ತರು- ಅಧಿಕಾರಿಗಳೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ಅ.30 ರಂದು ಸಂಜೆ 6ಗಂಟೆಗೆ
ಬ್ರಹ್ಮಾವರ ಮದರ್ ಪ್ಯಾಲೇಸ್ ಮಿನಿ ಸಭಾಂಗಣದಲ್ಲಿ ಜರಗಲಿದೆ.
ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಹಾಗೂ ತಾಲೂಕಿನ ಪತ್ರಕರ್ತರು, ವಿಶೇಷ ಆಹ್ವಾನಿತರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತಾಲೂಕು ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ದೀರ್ಘ ಕಾಲದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳು, ಕೆಲಸ-ಕಾರ್ಯಗಳಿಗೆ ಅಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡುತ್ತಿರುವ ಕುರಿತು ದೂರುಗಳು ಹಾಗೂ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಇರುವ ಸಾಮಾನ್ಯವಾದ ಪ್ರಮುಖ ಸಮಸ್ಯೆಗಳು, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ, ಕಂದಾಯ ಅಧಿಕಾರಿಗಳ ಕಚೇರಿ, ಜನಸ್ನೇಹಿ ಕೇಂದ್ರ ಸೇರಿದಂತೆ ಕಂದಾಯ ಇಲಾಖೆ ಕಾರ್ಯವೈಖರಿ ಸುಧಾರಣೆಗೆ ಸಾರ್ವಜನಿಕರ ಸಲಹೆಗಳನ್ನು ಶನಿವಾರ ಸಂಜೆ 4 ಗಂಟೆಯೊಳಗೆ ವಾಟ್ಸಫ್ ಅಥವಾ ಫೋನ್ ಕರೆ ಮೂಲಕ 9845376198, 9663953730, 9448438283 ಈ ಸಂಖ್ಯೆಗಳಿಗೆ ತಿಳಿಸಿದರೆ ಸಂವಾದದಲ್ಲಿ ಸಾರ್ವಜನಿಕ ಸಮಸ್ಯೆ, ಸಲಹೆಗಳನ್ನು ತಹಶೀಲ್ದಾರರ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸುವುದು ಎಂದು ಬ್ರಹ್ಮಾವರ ಪತ್ರಕರ್ತರ ಸಂಘ ತಿಳಿಸಿದೆ.
ಹಿಂದೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಕುರಿತು ಮಾಧ್ಯಮ ಸಂವಾದ ಮಾಡಿ ಗಮನಸೆಳೆಯಲಾಗಿತ್ತು.