Connect with us

Hi, what are you looking for?

Diksoochi News

ಕರಾವಳಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಸಿಎಂ ಸಭೆ; ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

0

ವರದಿ : ದಿನೇಶ್ ರಾಯಪ್ಪನಮಠ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಅಭಿವೃದ್ಧಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು, ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯವಿರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು.

ಈ ಸಂದರ್ಭ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೋಮೇಶ್ವರ ಬೀಚ್ ಮತ್ತು ಮರವಂತೆ ಬೀಚ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಡಿ.ಪಿ.ಆರ್. ಅಂತಿಮಗೊಳಿಸಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.

Advertisement. Scroll to continue reading.

ಪ್ರವಾಸೋದ್ಯಮ ಕಾಮಗಾರಿಗಳು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಿ.ಆರ್. ಝಡ್ ಅಧಿಸೂಚನೆಯನ್ನು ನವೆಂಬರ್-2021 ಅಂತ್ಯದೊಳಗೆ ಅಂತಿಮಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕೊಡಚಾದ್ರಿ-ಕೊಲ್ಲೂರು ರೋಪ್-ವೇ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ (ಪಿ.ಪಿ.ಪಿ. ಮಾದರಿಯಡಿ) ಅನುಷ್ಠಾನಗೊಳಿಸಲು ಶೀಘ್ರ ಟೆಂಡರ್ ಕರೆಯಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸೌಕೂರು ಏತ ನೀರಾವರಿ ಯೋಜನೆಯ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು, ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಇತರೆ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಅರೆ ಹೌದಾ!

1 ನವದೆಹಲಿ: ಮೆಟ್ರೋ ರೈಲಿನಲ್ಲಿ ಬಿಕಿನಿ, ಅಶ್ಲೀಲ ಕೃತ್ಯಗಳಿಂದ ಕುಖ್ಯಾತವಾಗಿದ್ದ ದೆಹಲಿಯಲ್ಲಿ ಇದೀಗ ಮಹಿಳೆಯೊಬ್ಬರು ಬಿಕಿನಿ ತೊಟ್ಟು ಬಸ್‌ ಹತ್ತಿದ್ದು ಆಕೆಯ ವೇಷವನ್ನು ನೋಡಲಾಗದೆ ಸಹ ಪ್ರಯಾಣಿಕರು ಸೀಟು ಬಿಟ್ಟು ಹೋದ ಘಟನೆ ನಡೆದಿದೆ....

ರಾಷ್ಟ್ರೀಯ

0 ನವದೆಹಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ನಿಗದಿತ ಮತಕ್ಕಿಂತ ಹೆಚ್ಚುವರಿ ಮತ ಬಿಜೆಪಿಗೆ ಬಿದ್ದಿರುವ ಹಿನ್ನಲೆ, ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಹಿರಿಯ ವಕೀಲ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ರಾಷ್ಟ್ರೀಯ

0 ನವದೆಹಲಿ: ಅಬಕಾರಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶತಾಯಗತಾಯ ಜಾಮೀನು ಪಡೆಯಲು ಜೈಲಲ್ಲಿ ಮಾವು, ಸಿಹಿ ತಿನಿಸುಗಳನ್ನು ತಿನ್ನುವ ಮೂಲಕ ಬೇಕಂತಲೇ ‘ಶುಗರ್’ ಹೆಚ್ಚಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಜಾರಿ...

ರಾಜ್ಯ

0 ಮಂಡ್ಯ: ಐಸ್ ಕ್ರೀಮ್ ಸೇವನೆ ಮಾಡಿದ ಬಳಿಕ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ತ್ರಿಶೂಲ್...

error: Content is protected !!