ದೆಹಲಿ : ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಿಸಿದ್ದಾರೆ. ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು. ತುರ್ತು ಸಭೆಯ ಬಳಿಕ ಅವರು ಕೈಗೊಳ್ಳಲಾದ ತೀರ್ಮಾನಗಳ ಬಗ್ಗೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಮಕ್ಕಳು ಕಲುಷಿತ ಗಾಳಿಯನ್ನ ಉಸಿರಾಡದಂತೆ ತಡೆಯಲು ಸೋಮವಾರದಿಂದ ಒಂದು ವಾರ ಕಾಲ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ. ಇದಲ್ಲದೇ ನವೆಂಬರ್ 14ರಿಂದ 17 ರ ವರೆಗೆ ದೆಹಲಿಯಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯ ಸರ್ಕಾರಿ ಕಚೇರಿಗಳ ನೌಕರರು ಒಂದು ವಾರ ಮನೆಯಿಂದಲೇ ಕೆಲಸ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಎಲ್ಲಾ ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ ಮುಚ್ಚಲ್ಪಡುತ್ತವೆ. ಸುಪ್ರೀಂ ಕೋರ್ಟ್‌ನಿಂದ ಲಾಕ್‌ಡೌನ್ ಹೇರುವ ಬಗ್ಗೆ ಮೇಲೆ ನ್ಯಾಯಾಲಯದ ಮುಂದೆ ಪ್ರಸ್ತಾವನೆಯನ್ನ ಇರಿಸಲಾಗುತ್ತದೆ. ಲಾಕ್‌ಡೌನ್ ಅನ್ನು ಹೇಗೆ ವಿಧಿಸಬಹುದು ಎಂಬುದರ ಕುರಿತು ನ್ಯಾಯಾಲಯದ ಮುಂದೆ ಪ್ರಸ್ತಾವನೆಯನ್ನು ಮಂಡಿಸಲಾಗುವುದು ಎಂದರು.
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಸಮಸ್ಯೆಯ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದ್ದು, ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದರು. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ಪರಿಸರ ಸಚಿವ ಗೋಪಾಲ್ ರೈ, ಮುಖ್ಯ ಕಾರ್ಯದರ್ಶಿ ವಿಜಯ್ ಕುಮಾರ್ ದೇವ್ ಸೇರಿದಂತೆ ಇತರ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.