ಚೆನ್ನೈ: ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರಿಗೆ ಕೊರೋನಾ ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದು, ಐಸೋಲೇಷನ್ ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಕಮಲ್ ಹಾಸನ್, ಸ್ವಲ್ಪ ಕೆಮ್ಮು ಕಾಣಿಸಿಕೊಂಡ ಕಾರಣ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಈಗ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದ್ದಾನೆ. ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ, ತಮ್ಮನ್ನು ತಾವು ನೋಡಿಕೊಳ್ಳುವಂತೆ ಎಲ್ಲರನ್ನೂ ಟ್ವೀಟ್ ಮಾಡುವ ಮೂಲಕ ಕೇಳಿಕೊಂಡಿದ್ದಾರೆ.
Advertisement. Scroll to continue reading.