Connect with us

Hi, what are you looking for?

Diksoochi News

ರಾಷ್ಟ್ರೀಯ

ಮಾರ್ಚ್ 2022ರ ವರೆಗೆ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ವಿಸ್ತರಣೆ

0

ನವದೆಹಲಿ: 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಇಂದು ಪ್ರಧಾನಮಂತ್ರಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಔಪಚಾರಿಕತೆಗಳನ್ನು ಪೂರ್ಣಗೊಳಿಸಿದೆ. ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ, ಈ ಮೂರು ಕಾನೂನುಗಳನ್ನು ಹಿಂದಕ್ಕೆ ತೆಗೆದುಕೊಳ್ಳುವುದು ನಮ್ಮ ಆದ್ಯತೆಯಾಗಿದೆ ಎಂದು ತಿಳಿಸಿದೆ.

ಇದೇ ವೇಳೆ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ಮಾರ್ಚ್ 2022 ರ ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ 2020 ರ ಮಾರ್ಚ್ ನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಘೋಷಿಸಿದ್ದರು. ಆರಂಭದಲ್ಲಿ ಏಪ್ರಿಲ್-ಜೂನ್ 2020ರ ಅವಧಿಗೆ ಪ್ರಾರಂಭಿಸಲಾಯಿತು. ಆದರೆ, ನಂತ್ರ ನವೆಂಬರ್ 30 ರವರೆಗೆ ವಿಸ್ತರಿಸಲಾಯಿತು. ಈಗ ಸರ್ಕಾರ ಮತ್ತೊಮ್ಮೆ 2022ರ ಮಾರ್ಚ್ ವರೆಗೆ ಉಚಿತ ಪಡಿತರ ಒದಗಿಸಲು ‘ಪಿಎಂ ಗರೀಬ್ ಕಲ್ಯಾಣ್ ಯೋಜನೆ’ ವಿಸ್ತರಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಮಂಗಳೂರಿನಲ್ಲಿ ಬೃಹತ್‌ ರೋಡ್‌ ಶೋ ಕೈಗೊಂಡರು.ರೋಡ್ ಶೋ ಗೂ ಮೊದಲು ನಾರಾಯಣ ಗುರು ವೃತ್ತದಲ್ಲಿ ನಾರಾಯಣ...

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

error: Content is protected !!