Connect with us

Hi, what are you looking for?

ಕರಾವಳಿ

ಉಡುಪಿ : ವಿಧಾನ ಪರಿಷತ್ ಚುನಾವಣೆ: ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಿರಿ : ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ

ಉಡುಪಿ: ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್‌ಗೆ ಡಿಸೆಂಬರ್ 10 ರಂದು ನಡೆಯುವ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಚುನಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಹೇಳಿದರು.
ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಕೇಂದ್ರದಲ್ಲಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲು ನಿಯೋಜಿಸಿರುವ ಮಾಸ್ಟರ್ ಟ್ರೈನಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯ ನಗರ/ಗ್ರಾಮೀಣ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳು, ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಮತಗಟ್ಟೆ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆಗಳ ಕುರಿತು ಸೂಕ್ತ ತರಬೇತಿ ನೀಡಬೇಕು. ಮತದಾನ ಸಂದರ್ಭದಲ್ಲಿ ಮತಗಟ್ಟೆಯಲ್ಲಿ ಅವರಿಗೆ ಯಾವುದೇ ಗೊಂದಲಗಳು ಉಂಟಾಗದಂತೆ ವಿವರವಾದ ಮಾಹಿತಿಯನ್ನು ನೀಡುವಂತೆ ಮಾಸ್ಟರ್ ಟ್ರೈನಿಗಳಿಗೆ ತಿಳಿಸಿದ ಅಪರ ಜಿಲ್ಲಾಧಿಕಾರಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಒಟ್ಟಾಗಿ, ಯಾವುದೇ ದೂರುಗಳಿಗೆ ಆಸ್ಪದ ನೀಡದ ರೀತಿಯಲ್ಲಿ  ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಮಾಸ್ಟರ್ ಟ್ರೈನರ್ ಅಶೋಕ್ ಕಾಮತ್, ಚುನಾವಣಾ ಅಧೀಕ್ಷಕರಾದ ಜಯಲಕ್ಷ್ಮಿ ಮತ್ತು ಸಂಪತ್ ಹಾಗೂ ಜಿಲ್ಲೆಯ 7 ತಾಲೂಕುಗಳ ಮಾಸ್ಟರ್ ಟ್ರೈನರ್‌ಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28) ಬಂಧಿತ...

Uncategorized

ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು ಗ್ರಾಮ...

Uncategorized

ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ ಅನ್ನದಾನ...

Uncategorized

ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ ತುರ್ತು...

error: Content is protected !!