Connect with us

Hi, what are you looking for?

Diksoochi News

ರಾಜ್ಯ

ಶಿವಮೊಗ್ಗ : ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

0

ಶಿವಮೊಗ್ಗ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಬಸ್ಸಿನಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿರೋ ಘಟನೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.

ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದಂತ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಪಲ್ಟಿಯಾಗಿದೆ.

ಗಾಯಗೊಂಡ ಪ್ರಯಾಣಿಕರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಸ್ಥಳೀಯರು, ಬಸ್ಸಿನಲ್ಲಿದ್ದಂತ ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!