ನೋಯ್ಡಾ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಜೇವಾರ್ ನಲ್ಲಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ವಿಮಾನ ನಿಲ್ದಾಣದ ಮೊದಲ ಹಂತದ ಅಭಿವೃದ್ಧಿಯನ್ನು 10,050 ಕೋಟಿ ರೂಪಾಯಿಗಳಿಗೂ ಹೆಚ್ಚು ವೆಚ್ಚದಲ್ಲಿ ಮಾಡಲಾಗುತ್ತಿದ್ದು, ವಿಮಾನ ನಿಲ್ದಾಣವು 1300 ಹೆಕ್ಟೇರ್ʼಗೂ ಹೆಚ್ಚು ಭೂಮಿಯಲ್ಲಿ ಹರಡಿದೆ. ಪೂರ್ಣಗೊಂಡ ಮೊದಲ ಹಂತದ ವಿಮಾನ ನಿಲ್ದಾಣವು ವರ್ಷಕ್ಕೆ ಸುಮಾರು 1.2 ಕೋಟಿ ಪ್ರಯಾಣಿಕರಿಗೆ ಸೇವೆ ಒದಗಿಸುವ ಸಾಮರ್ಥ್ಯ ಹೊಂದಿರಲಿದೆ. ಯೋಜನೆಯು 2024ರ ವೇಳೆಗೆ ಪೂರ್ಣಗೊಳ್ಳಲಿದೆ. ವಿಮಾನ ನಿಲ್ದಾಣವು ಕಾರ್ಯರೂಪಕ್ಕೆ ಬಂದ ನಂತರ, ಇದು ಏಷ್ಯಾದ ಅತಿದೊಡ್ಡ ವಿಮಾನ ನಿಲ್ದಾಣವಾಗಲಿದ್ದು, ವಿಶ್ವದ ನಾಲ್ಕನೇ ಅತಿದೊಡ್ಡ ವಿಮಾನ ನಿಲ್ದಾಣವಾಗಲಿದೆ.
Advertisement. Scroll to continue reading.