ನವದೆಹಲಿ: ಭಾರತದಲ್ಲಿ 2 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದೆ. 49 ಮತ್ತು 32 ವರ್ಷದ ಇಬ್ಬರು ವೈದ್ಯರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನವೆಂಬರ್ 19,20, 21ರಲ್ಲಿ ಖಾಸಗಿ ಹೊಟೇಲ್ ನಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಇಬ್ಬರು ಭಾಗಿಯಾಗಿದ್ದರು ಎನ್ನಲಾಗಿದೆ. ಇಬ್ಬರಿಗೂ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಇಬ್ಬರ ಸಂಪರ್ಕಿತರನ್ನ ಪತ್ತೆ ಹಚ್ಚುವ ಕೆಲಸ ಮಾಡಲಾಗಿದೆ. ಸೋಂಕು ಹರಡದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.