ಹೈದರಾಬಾದ್ :ತಂಬಾಕು ಉತ್ಪನ್ನಗಳನ್ನು ನಿಷೇಧಿಸಿ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಇಂದಿನಿಂದ ತಂಬಾಕು, ಗುಟ್ಕಾ, ಪಾನ್ ಮಸಾಲಾವನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಡಿಸೆಂಬರ್ 7 ರಿಂದ ಗುಟ್ಕಾ, ಪಾನ್ ಮಸಾಲಾ ಮತ್ತು ಜಗಿಯಲಾದ ತಂಬಾಕು ವಸ್ತುಗಳ ತಯಾರಿಕೆ, ವಿತರಣೆ ಮತ್ತು ಮಾರಾಟವನ್ನು ಸರ್ಕಾರ ನಿಷೇಧಿಸಿದ್ದು, ಯಾರೇ ನಿಯಮಗಳನ್ನು ಉಲ್ಲಂಘಿಸಿದರೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ನಿಕೋಟಿನ್ ತುಂಬಿದ ಉತ್ಪನ್ನಗಳು ಈಗ ಯಾವುದೇ ಹೆಸರಿನಲ್ಲಿ ತಯಾರಿಸಲು, ಮಾರಾಟ ಮಾಡಲು, ಪೂರೈಸಲು ಮತ್ತು ಸಂಗ್ರಹಿಸಲು ಅಪರಾಧವಾಗುತ್ತವೆ. ನಿಯಮ ಉಲ್ಲಂಘಿಸಿದರೆ ಕ್ರಮ ತಪ್ಪಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಗುಟ್ಕಾ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ 160 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದೆಲ್ಲವನ್ನು ವಜಾ ಮಾಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Advertisement. Scroll to continue reading.