ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಮಾರ್ಗನ್ಸ್ ಸ್ಟ್ರೀನ್ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡ, ಹೆಂಡತಿ, ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾಗೇಶ್ ಸದರಿಗುಪ್ಪೆ(30), ವಿಜಯಲಕ್ಷ್ಮಿ (26), ಮಕ್ಕಳಾದ ಸ್ವಪ್ನ(8), ಸಮರ್ಥ್(4) ಮೃತಪಟ್ಟವರು.
Advertisement. Scroll to continue reading.
ಮೃತರು ಮೂಲತಃ ಬಾಗಲಕೋಟೆಯ ಬಿಳಗಿ ತಾಲೂಕಿನ ಸುನಗ್ ಗ್ರಾಮದವರು ಎನ್ನಲಾಗಿದೆ. ನಾಗೇಶ್ ಚಾಲಕರಾಗಿದ್ದು, ವಿಜಯಲಕ್ಷ್ಮಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 15 ದಿನದ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದರು ಎನ್ನಲಾಗಿದೆ.
ಮನೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
Advertisement. Scroll to continue reading.