ಜಮ್ಮು-ಕಾಶ್ಮೀರ: ಮತ್ತೆ ಜಮ್ಮು-ಕಾಶ್ಮೀರದಲ್ಲಿ ಉಗ್ರರು ದಾಳಿ ಮುಂದುವರೆಸಿದ್ದು, ಇಂದು ನಡೆದಂತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವಿನ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೊಹಮ್ಮದ್ ಸುಲ್ತಾನ್ ಹಾಗೂ ಫಯಾಜ್ ಅಹಮದ್ ಹುತಾತ್ಮರಾಗಿದ್ದಾರೆ.
ಇನ್ನುಳಿದ ಇಬ್ಬರು ಯೋಧರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಉಗ್ರರ ದಾಳಿಯನ್ನು ಹತ್ತಿಕ್ಕಲು ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿದು ಬಂದಿದೆ.
Advertisement. Scroll to continue reading.