ಬೆಂಗಳೂರು: ಡಿಸೆಂಬರ್ 8 ರಂದು ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಂತಹ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 14 ಮಂದಿಯನ್ನು ಕರೆದೊಯ್ಯುತ್ತಿದ್ದಂತಹ ಮಿಗ್-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಡಿಸೆಂಬರ್ 8ರಂದು ಪತನಗೊಂಡಿತ್ತು. ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು.
ಈ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತಹ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು, ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಬಗ್ಗೆ ಐಎಎಫ್ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಮಾಹಿತಿ ನೀಡಿದೆ.
Advertisement. Scroll to continue reading.
In this article:Diksoochi news, diksoochi Tv, diksoochi udupi, Group Captain Varun Singh
Click to comment