Connect with us

Hi, what are you looking for?

Diksoochi News

ರಾಜ್ಯ

ಕಾಲೇಜುಗಳಲ್ಲಿ ಕಡ್ಡಾಯ ಕನ್ನಡ ಕಲಿಕೆ ಕುರಿತು ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್

2

ಬೆಂಗಳೂರು : ರಾಜ್ಯದ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಸೂಚನೆ ನೀಡಿದೆ. ಮುಂದಿನ ಆದೇಶದವರೆಗೂ ಬಲವಂತದ ಕನ್ನಡ ಕಡ್ಡಾಯ ಬೇಡ ಎಂದು ಹೇಳಿದೆ.

ರಾಜ್ಯ ಸರ್ಕಾರವು ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್ ಪಿಐಎಲ್ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಎಂದು ಸೂಚನೆ ನೀಡಿದೆ.

ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಎಂಬುದಾಗಿ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಯನ್ನು ನೀಡಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!