ಬೆಳಗಾವಿ : ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ ಎಂಧು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಮಾಹಿತಿ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ. ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ. ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್ ಪೇಪರ್ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ ಎಂದಿದ್ದಾರೆ.
Advertisement. Scroll to continue reading.