ಬೆಂಗಳೂರು : ಬೆಳಗಾವಿಯಲ್ಲಿ ನಿನ್ನೆ ತಡರಾತ್ರಿ ಎಂಇಎಸ್ ಪುಂಡರು ಪುಂಡಾಟಿಕೆ ಮೆರೆದಿದ್ದು, ಇಡೀ ರಾಜ್ಯವೇ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ. ನಟ ದರ್ಶನ್ ಕೂಡ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು’ ಎಂದು ಮುಖ್ಯಮಂತ್ರಿಗಳಿಗೆ ಅವರು ಮನವಿ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಎರಡು ದಿನದ ಹಿಂದೆ ಬಂಧಿತರಾದ ಕನ್ನಡ ಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕು ಹಾಗೂ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದರು. ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ’ ಎಂದು ಅವರು ಮನವಿ ಮಾಡಿಕೊಂಡಿದ್ದರು.