ಕೊಲಂಬೊ : ತಮಿಳುನಾಡಿನ 43 ಮೀನುಗಾರರನ್ನು ಶ್ರೀಲಂಕಾದಲ್ಲಿ ಬಂಧಿಸಲಾಗಿದ್ದು, ಆರು ದೋಣಿಗಳನ್ನು ಶ್ರೀಲಂಕಾ ನೌಕಾ ಸಿಬ್ಬಂದಿ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಮೀನುಗಾರರು ಡಿಸೆಂಬರ್ 18 ರಂದು 500 ಕ್ಕೂ ಹೆಚ್ಚು ದೋಣಿಗಳಲ್ಲಿ ಹೊರಟು ಕಚ್ಚತೀವು ದ್ವೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಲ್ಲಿ 43 ಮಂದಿಯನ್ನು ಬಂಧಿಸಿ ಆರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.
ಅವರ ಬಂಧನದ ನಂತರ ಅವರನ್ನು ಕಂಗೆಸಂತುರೈ ಶಿಬಿರಕ್ಕೆ ಕರೆದೊಯ್ಯಲಾಯಿತು ಎನ್ನಲಾಗಿದೆ.
Advertisement. Scroll to continue reading.
ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಲ್ಲಿನ ಮೀನುಗಾರರ ಸಂಘ ಸೋಮವಾರ ಪ್ರತಿಭಟನೆ ನಡೆಸಲಿದ್ದು, ‘ಅನಿರ್ದಿಷ್ಟಾವಧಿ ಮುಷ್ಕರ’ವನ್ನೂ ಘೋಷಿಸಿದೆ.
ರಾಮನಾಥಪುರ ಸಂಸದ ಕೆ.ನವಾಸ್ ಕಣಿ ಅವರು ಕೇಂದ್ರ ಸಚಿವರೊಂದಿಗೆ ಮಾತನಾಡಿ ಮೀನುಗಾರರು ಮತ್ತು ಅವರ ದೋಣಿಗಳ ಬಿಡುಗಡೆಗೆ ತಕ್ಷಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
In this article:Diksoochi news, diksoochi Tv, diksoochi udupi, fisherman arrested, shrilanka, tamilnadu
Click to comment