ರಾಮನಗರ : ಮಾಗಡಿ ತಾಲೂಕಿನ ಸೋಲುರು ಗ್ರಾಮದ ಚೆಲುಮೆ ಮಠದ ಸ್ವಾಮೀಜಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸೋಲುರು ಗ್ರಾಮದ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ (52) ಮೃತಪಟ್ಟವರು.
ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳು ಹುಟ್ಟಿಕೊಂಡಿವೆ.
Advertisement. Scroll to continue reading.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.