ಬೆಂಗಳೂರು: ಕೆಎಸ್‌ಆರ್ ಪಿ ಮತ್ತು ಐಆರ್ ಬಿ ಯಲ್ಲಿ ಖಾಲಿ ಇರುವಂತ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ನಿನ್ನೆಯಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಈ ಹುದ್ದೆಗಳಲ್ಲಿ ತೃತೀಯ ಲಿಂಗಿಯರಿಗೂ ಮೀಸಲಾತಿಯನ್ನು ಕಲ್ಪಿಸಲಾಗಿದ್ದು, ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಈ ಬಗ್ಗೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 70 ಕೆ ಎಸ್ ಆರ್ ಪಿ ಹಾಗೂ ಐ ಆರ್ ಬಿ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿರುವುದಾಗಿ ತಿಳಿಸಲಾಗಿದೆ ತಿಳಿಸಿದೆ.
ನಿನ್ನೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 18, 2022ರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ. ಅರ್ಜಿ ಶುಲ್ಕ ಪಾವತಿಗೆ ದಿನಾಂಕ ಜನವರಿ 20, 2022 ಕೊನೆಯ ದಿನವಾಗಿದೆ.
ವಯೋಮಿತಿ : ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 28 ವರ್ಷ, ಇತರೆ ಅಭ್ಯರ್ಥಿಗಳಿಗೆ 26 ವರ್ಷ.
ಅರ್ಜಿ ಶುಲ್ಕ : ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ರೂ.250, ಇತರರಿಗೆ ರೂ.500
ವೇತನ ಶ್ರೇಣಿ : ರೂ.37,900ರಿಂದ 70,850
ನೇಮಕಾತಿ ವಿಧಾನ : ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ : ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿಯನ್ನು http://www.kecruitment.ksp.gov.in ಜಾಲತಾಣದ ಮೂಲಕ ಸಲ್ಲಿಸಬೇಕಾಗಿರುತ್ತದೆ.
ಈ 70 ಹುದ್ದೆಗಳಲ್ಲಿ ನೂತನ ತಿದ್ದುಪಡಿ ಕಾಯ್ದೆಯಂತೆ ಐದು ಹುದ್ದೆಗಳನ್ನು ತೃತೀಯ ಲಿಂಗಿಯರಿಗೆ ಮೀಸಲು ಇಡಲಾಗಿದೆ. ಈ ಮೂಲಕ ಮಂಗಳ ಮುಖಿಯರಿಗೆ ಪಿಎಸ್‌ಐ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.