ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಭಾರತದಲ್ಲಿ ಹೊಸ ಕೋವಿಡ್-19 ರೂಪಾಂತರ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ದೇಶದಲ್ಲಿ 213 ಪ್ರಕರಣ:
ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಾಗಿದ್ದು, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ದೆಹಲಿಯಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣ ದಾಖಲಾಗಿದೆ. 57 ಪ್ರಕರಣಗಳು ಕಂಡು ಬಂದಿವೆ. ಮಹಾರಾಷ್ಟ್ರದಲ್ಲಿ 54, ತೆಲಂಗಾಣದಲ್ಲಿ 24, ಕರ್ನಾಟಕದಲ್ಲಿ 19, ರಾಜಸ್ಥಾನದಲ್ಲಿ 18, ಕೇರಳದಲ್ಲಿ 15 ಮತ್ತು ಗುಜರಾತ್ ನಲ್ಲಿ 14 ಪ್ರಕರಣಗಳು ದಾಖಲಾಗಿವೆ.