Connect with us

Hi, what are you looking for?

Diksoochi News

ರಾಜ್ಯ

ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ

3

ಬೆಳಗಾವಿ: ವಿಧಾನಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಸಿದ್ದ ಮತಾಂತರ ನಿಷೇಧ ಕಾಯ್ದೆ ಇಮದು ಧ್ವನಿ ಮತದ ಮೂಲದ ಅಂಗೀಕಾರವಾಗಿದೆ. ವಿಧಾನಸಭೆಯಲ್ಲಿ ಕಳೆದ ಎರಡು ದಿನದಿಂದ ಸದನದಲ್ಲಿ ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿತ್ತು. ವಿಪಕ್ಷಗಳ ತೀವ್ರ ವಿರೋಧದ ನಡುವೆ ಮಸೂದೆ ಅಂಗೀಕಾರಗೊಂಡಿದೆ.

ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021 ನ್ನು ಜಾರಿಗೆ ತರಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!