ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಯಿ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಬಳಿಕ ಆರೋಗ್ಯ ಸಚಿವ ಸುಧಾಕರ್ ಮಾತನಾಡಿ, ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ಹತ್ತು ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು.
ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಬಹಿರಂಗ ಪಾರ್ಟಿಗಳಿಗೂ ಕಡಿವಾಣ ಹಾಕಲಾಗಿದೆ. ಸಭೆ-ಸಮಾರಂಭಗಳಿಗೆ ಶೇ.50ರಷ್ಟು ಮಾತ್ರ ಅವಕಾಶ ನೀಡಲಾಗಿದೆ.
Advertisement. Scroll to continue reading.
ಹೊಸ ವರ್ಷಾಚರಣೆ ವೇಳೆ ಕೋವಿಡ್ ಮತ್ತು ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
In this article:Diksoochi news, diksoochi Tv, diksoochi udupi, Dr.sudhakar, Karnataka, night curfew
Click to comment